ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾನುವಾರ ಸಂಜೆ ದೆಹಲಿಯ ರೂಸ್ ಅವೆನ್ಯೂ ರಸ್ತೆಯ ದೀನ್ ದಯಾಳ್ ಉಪಾಧ್ಯಾಯ ಮಾರ್ಗದಲ್ಲಿರುವ ಆಮ್ ಆದ್ಮಿ ಪಕ್ಷದ (ಎಎಪಿ) ಕಚೇರಿ ಬಳಿಯ ಜನರೇಟರ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಅಗ್ನಿಶಾಮಕ ದಳದ ಸಿಬ್ಬಂದಿ ಮಾಹಿತಿ ಮೇರೆಗೆ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ. ಘಟನೆಯಿಂದ ಯಾವುದೇ ಪ್ರಾಣಹಾನಿ ಅಥವಾ ಗಾಯಗಳ ಬಗ್ಗೆ ವರದಿಯಾಗಿಲ್ಲ.
ವಿಷಯದ ಕುರಿತು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.