ಬೆಂಗಳೂರಿನ ನೈಸ್ ರಸ್ತೆಯಲ್ಲಿ ಅಗ್ನಿ ಅವಘಡ: ಬಾನೆತ್ತರಕ್ಕೆ ಚಿಮ್ಮಿದ ಬೆಂಕಿ, ಪ್ರಯಾಣಿಕರ ಪರದಾಟ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಬೆಂಗಳೂರಿನ ನೈಸ್ ರಸ್ತೆಯಲ್ಲಿ ಭಾನುವಾರ ಭೀಕರ ಅಗ್ನಿ ಅವಘಡವೊಂದು ಸಂಭವಿಸಿದ್ದು, ಡೀಸೆಲ್​​ ಟ್ಯಾಂಕರ್ ಪಲ್ಟಿಯಾಗಿ ಹೊತ್ತಿ ಉರಿದಿದೆ. ಕನಕಪುರ ರಸ್ತೆ ಟೋಲ್‌ನಿಂದ ಅಂಜನಾಪುರ ಕಡೆಗೆ ಚಲಿಸುತ್ತಿದ್ದ ವೇಳೆ ಈ ಅವಘಡ ಸಂಭವಿಸಿದ್ದು, ಬೆಂಕಿಯ ಕೆನ್ನಾಲಿಗೆ ಬಾನೆತ್ತರಕ್ಕೆ ಚಿಮ್ಮುತ್ತಿದೆ. ಘಟನಾ ಸ್ಥಳಕ್ಕೆ ತಲಘಟ್ಟಪುರ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ತಕ್ಷಣವೇ ಧಾವಿಸಿದ್ದು, ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ. ಆದರೆ, ಬೆಂಕಿಯ ತೀವ್ರತೆ ಹೆಚ್ಚಾಗಿರುವುದರಿಂದ ಕಳೆದ ಒಂದೂವರೆ ಗಂಟೆಯಿಂದಲೂ ನಿಯಂತ್ರಣಕ್ಕೆ ಬರುತ್ತಿಲ್ಲ. ಇದರಿಂದಾಗಿ ಇಡೀ ಪ್ರದೇಶದಲ್ಲಿ … Continue reading ಬೆಂಗಳೂರಿನ ನೈಸ್ ರಸ್ತೆಯಲ್ಲಿ ಅಗ್ನಿ ಅವಘಡ: ಬಾನೆತ್ತರಕ್ಕೆ ಚಿಮ್ಮಿದ ಬೆಂಕಿ, ಪ್ರಯಾಣಿಕರ ಪರದಾಟ