ಟರ್ಪಂಟೈನ್ ತೈಲ ತಯಾರಿಕಾ ಘಟಕದಲ್ಲಿ ಅಗ್ನಿ ಅವಘಡ: ನಾಲ್ಕು ಮಂದಿ ಸಜೀವ ದಹನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜಸ್ಥಾನದ ಜಾಮ್ವಾ ರಾಮ್​​​ಗಢದಲ್ಲಿರುವ ಟರ್ಪಂಟೈನ್ ತೈಲ ತಯಾರಿಕಾ ಘಟಕದಲ್ಲಿ ಭಾನುವಾರ ಭಾರಿ ಅಗ್ನಿ ಅವಘಡ ಸಂಭವಿಸಿದ್ದು,ಮೂವರು ಮಕ್ಕಳು ಸಹಿತ ನಾಲ್ವರು ಮೃತಪಟ್ಟಿದ್ದಾರೆ.
ಸ್ಥಳಕ್ಕೆ ನಾಗರಿಕ ರಕ್ಷಣಾ ತಂಡ ಮತ್ತು ಪೊಲೀಸರು ಕೂಡ ಸ್ಥಳಕ್ಕೆ ಆಗಮಿಸಿದ್ದು,ಅಗ್ನಿಶಾಮಕ ದಳದ ಸಹಾಯದಿಂದ ಬೆಂಕಿ ನಂದಿಸುವ ಪ್ರಯತ್ನ ನಡೆಯುತ್ತಿದೆ.
ಕಾರ್ಖಾನೆ ಮಾಲೀಕರು ತಮ್ಮಸ್ವಂತ ಮನೆಯಲ್ಲೇ ಕಾರ್ಖಾನೆ ಸ್ಥಾಪಿಸಿದ್ದರು. ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿವೆ. ಈ ಬೆಂಕಿ ಅನಾಹುತಕ್ಕೆ ಕಾರಣವಿನ್ನೂ ಲಭ್ಯವಾಗಿಲ್ಲ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!