ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಸ್ಪತ್ರೆಯೊಂದರಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿರುವ ಘಟನೆ ಗುಜರಾತ್‌ನಲ್ಲಿ ನಡೆದಿದೆ. ರಾಜ್ಯದ ಅಹಮದಾಬಾದ್ ನಗರದಲ್ಲಿ ಭಾನುವಾರ ಮುಂಜಾನೆ 4.30ರ ಸುಮಾರಿಗೆ ಸಾಹಿಬಾಗ್ ಪ್ರದೇಶದ ರಾಜಸ್ಥಾನ ಆಸ್ಪತ್ರೆಯ ನೆಲಮಾಳಿಗೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಕೂಡಲೇ ಆಸ್ಪತ್ರೆಯಲ್ಲಿದ್ದ 100 ರೋಗಿಗಳನ್ನು ಬೇರೆ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ. ತಕ್ಷಣ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಿಯಂತ್ರಿಸಲು ಪ್ರಯತ್ನಿಸುತ್ತಿದ್ದಾರೆ ಆದರೆ ಇನ್ನೂ ಹತೋಟಿಗೆ ಬಂದಿಲ್ಲ. ಚಾರಿಟಬಲ್ ಟ್ರಸ್ಟ್ ನಡೆಸುತ್ತಿರುವ ಆಸ್ಪತ್ರೆಯಲ್ಲಿ ಬೆಂಕಿ ಹೊತ್ತಿಕೊಳ್ಳಲು ಕಾರಣ ತಿಳಿದುಬಂದಿಲ್ಲ. ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.