ಅತ್ತಿಬೆಲೆ ಪಟಾಕಿ ಗೋಡೌನ್‌ನಲ್ಲಿ ಅಗ್ನಿ ಅವಘಡ: ಮೃತರ ಸಂಖ್ಯೆ 14ಕ್ಕೆ ಏರಿಕೆ, ಸ್ಥಳಕ್ಕೆ ಇಂದು ಸಿಎಂ ಭೇಟಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಆನೇಕಲ್ ತಾಲೂಕಿನ ಅತ್ತಿಬೆಲೆಯ ಪಟಾಕಿ ಗೋಡೌನ್‌ನಲ್ಲಿ ಶನಿವಾರ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಮೃತರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ.

ಶನಿವಾರ ಮಧ್ಯಾಹ್ನ 3.30ಕ್ಕೆ ಲಾರಿಯಿಂದ ಪಟಾಕಿ ಇಳಿಸಲಾಗುತ್ತಿತ್ತು. ಈ ವೇಳೆ ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ದುರಂತ ಸಂಭವಿಸಿದೆ. ಶನಿವಾರ ತಡರಾತ್ರಿವರೆಗೆ ಕಾರ್ಯಾಚರಣೆ ಕೈಗೊಂಡು ಬೆಂಕಿ ನಂದಿಸುವಲ್ಲಿ ಅಗ್ನಿ ಶಾಮಕ ದಳದ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಘಟನೆಯಲ್ಲಿ ಈವರೆಗೆ ಮೃತಪಟ್ಟವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ಮೃತಪಟ್ಟ ಕಾರ್ಮಿಕರ ಪೈಕಿ ಬಹುತೇಕರು ತಮಿಳುನಾಡಿನ ಶಿವಕಾಶಿ ಮೂಲದವರು ಎಂದು ತಿಳಿದು ಬಂದಿದೆ.

ಈ ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋದಾಮಿನ ಮಾಲಿಕರಾದ ರಾಮಸ್ವಾಮಿ ರೆಡ್ಡಿ ಹಾಗೂ ಜಾಗದ ಮಾಲೀಕ ಅನಿಲ್ ವಿರುದ್ಧ ಅತ್ತಿಬೆಲೆ ಪೊಲೀಸ್​​ ಠಾಣೆಯಲ್ಲಿ ಐಪಿಸಿ ಸೆಕ್ಷನ್ 337, 338, 304 ಅಡಿ ಎಫ್​ಐಆರ್​​ ದಾಖಲಾಗಿದೆ.

ಈ ದುರಂತದ ಕುರಿತಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ಅವರು ಭಾನುವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ದುರಂತದಲ್ಲಿ ಮೃತಪಟ್ಟವರ ಕುಟುಂಬದವರಿಗೆ ಸರ್ಕಾರ ಈಗಾಗಲೇ 5 ಲಕ್ಷ ರೂ. ಪರಿಹಾರ ಘೋಷಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!