ಹೊಸದಿಗಂತ ಆನ್ ಲೈನ್ ಡೆಸ್ಕ್:
ಗುಜರಾತ್ ನ ಭರೂಜ್ ಜಿಲ್ಲೆಯಲ್ಲಿರುವ ಯುಪಿಎಲ್ ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ್ದು, 20ಕ್ಕೂ ಹೆಚ್ಚು ಕಾರ್ಮಿಕರು ಗಾಯಗೊಂಡಿದ್ದಾರೆ.
ಸೋಮವಾರ ಮಧ್ಯರಾತ್ರಿ 2 ಗಂಟೆ ವೇಳೆಗೆ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬಳಿಕ ಪ್ರಬಲ ಸ್ಫೋಟ ಸಂಭವಿಸಿದೆ. ಸ್ಫೋಟದ ತೀವ್ರತೆಗೆ ಕಾರ್ಖಾನೆ ಸುತ್ತ ಮುತ್ತಲಿನ ಮನೆಗಳ ಕಿಟಕಿ ಗಾಜುಗಳು ಪುಡಿಯಾಗಿದೆ.
ಕೂಡಲೇ ಸ್ಥಳಕ್ಕೆ ದೌಡಾಯಿಸಿದ 15 ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ಪೊಲೀಸ್ ಇನ್ಸ್ ಪೆಕ್ಟರ್ ಪಿ.ಎಚ್.ವಾಸವಾ ತಿಳಿಸಿದ್ದಾರೆ.
ಸದ್ಯ ಗಾಯಗೊಂಡವರಲ್ಲಿ 12 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಉಳಿದವರು ಚಿಕಿತ್ಸೆ ಪಡೆಯುತ್ತಿದ್ದಾರೆ.