ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿಯ ಕೋಚಿಂಗ್ ಸೆಂಟರ್ ಒಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಗಾಬರಿಗೊಂಡ ವಿದ್ಯಾರ್ಥಿಗಳು ಕಿಟಕಿ ಒಡೆದು ಕಿಟಕಿಯಿಂದ ಇಳಿದಿದ್ದಾರೆ.
ಮುಖರ್ಜಿ ನಗರದ ಕೋಚಿಂಗ್ ಸೆಂಟರ್ ಇದಾಗಿದ್ದು, ನಾಲ್ಕನೇ ಮಹಡಿಯಿಂದ ವಿದ್ಯಾರ್ಥಿಗಳು ಕೆಳಕ್ಕೆ ಇಳಿಯುತ್ತಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿದ್ದು, ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಯಾವುದೇ ಪ್ರಾಣಾಪಾಯ ಆಗಿಲ್ಲ.
https://twitter.com/Sisodia19Rahul/status/1669254141116395522?s=20