ಹೊಸದಿಗಂತ ಡಿಜಿಟಲ್ ಡೆಸ್ಕ್:
ನಗರದ ಹೊರವಲಯದ ಪಡೀಲ್ ಅಳಪೆ ಸಮೀಪದ ನಾಗುರಿ ಬಳಿ ಎಲೆಕ್ಟ್ರಿಕ್ ಸ್ಕೂಟರ್ ಶೋರೂಮ್ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಲಕ್ಷಾಂತರ ರೂ. ಮೌಲ್ಯದ ಸೊತ್ತು ಬೆಂಕಿಗಾಹುತಿಯಾಗಿದೆ. ಇಂದು ಬೆಳಗ್ಗೆ ಶೋರೂಮ್ನಲ್ಲಿ ಏಕಾಏಕಿ ಹೊಗೆ ಕಾಣಿಸಿದ್ದು, ಸ್ಥಳೀಯರು ಗಮನಿಸಿ ಅಗ್ನಿಶಾಮಕ ದಳ, ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ವರ್ಗ ಬೆಂಕಿ ನಂದಿಸುವಲ್ಲಿ ತೊಡಗಿಕೊಂಡಿದ್ದಾರೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗ್ತುತಿದೆ.