ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಾರ್ಖಂಡ್‌ನ ಗರ್ವಾದಲ್ಲಿನ ಪಟಾಕಿ ಅಂಗಡಿಯಲ್ಲಿ ಬೆಂಕಿ ಅವಘಡ ಸಂಭಿಸಿದ್ದು, ಮೂವರು ಮಕ್ಕಳು ಸೇರಿ ಐವರು ಸಜೀವ ದಹನವಾಗಿದ್ದಾರೆ.
ಗರ್ವಾ ಜಿಲ್ಲೆಯ ರಂಕಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿದ್ದ ಪಟಾಕಿ ಅಂಗಡಿಯಲ್ಲಿ ಅಗ್ನಿ ದುರಂತ ಸಂಭವಿಸಿದೆ. ಘಟನೆ ಕುರಿತು ತನಿಖೆ ನಡೆಸುತ್ತಿರುವುದಾಗಿ ಎಸ್ಪಿ ದೀಪಕ್ ಪಾಂಡೆ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
ಮಧ್ಯಾಹ್ನ 12.30ರ ಸುಮಾರಿಗೆ ಅಂಗಡಿಯಲ್ಲಿ ಪಟಾಕಿ ಮಾರಾಟ ಮಾಡುತ್ತಿದ್ದಾಗ ಬೆಂಕಿ ಕಾಣಿಸಿಕೊಂಡಿದೆ. ಪರಿಣಾಮ ಐವರು ಮೃತಪಟ್ಟಿದ್ದಾರೆ. ಕೂಡಲೇ ಗಾಯಾಳುಗಳನ್ನು ಛತ್ತೀಸ್‌ಗಢದ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ ಎಂದು ರಂಕಾ ಎಸ್‌ಡಿಪಿಒ ರೋಹಿತ್ ರಂಜನ್ ಸಿಂಗ್ ತಿಳಿಸಿದರು.
ಮುಖ್ಯಮಂತ್ರಿ ಹೇಮಂತ್ ಸೊರೆನ್ ಘಟನೆಯ ಕುರಿತು ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಳ್ಳುವ ಮೂಲಕ ಸಂತಾಪ ಸೂಚಿಸಿದ್ದಾರೆ.