ಸರ್ಕಾರಿ ಇಂಧನ ಸಂಗ್ರಹಣಾ ಡಿಪೋದಲ್ಲಿ ಬೆಂಕಿ : ಇಬ್ಬರು ಮಕ್ಕಳು ಸೇರಿ 16 ಮಂದಿ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಂಡೋನೇಷ್ಯಾದ ಜಕಾರ್ತಾದ ಸರ್ಕಾರಿ ಇಂಧನ ಸಂಗ್ರಹಣಾ ಡಿಪೋದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು,ಇಬ್ಬರು ಮಕ್ಕಳು ಸೇರಿ16 ಮಂದಿ ಮೃತಪಟ್ಟಿದ್ದಾರೆ.

ಅಗ್ನಿ ಅವಘಡದಲ್ಲಿ 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಸುತ್ತಮುತ್ತಲಿನ ಸಾಕಷ್ಟು ಮನೆಗಳು ಬೆಂಕಿಗೆ ಆಹುತಿಯಾಗಿವೆ. ಸದ್ಯ ಇಂಧನ ಡಿಪೋ ಸುತ್ತಮುತ್ತ ಇರುವ ನಿವಾಸಿಗಳನ್ನು ಸ್ಥಳಾಂತರಿಸಲಾಗಿದೆ.

ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಮಿಲಿಟರಿ ಮುಖ್ಯಸ್ಥ ಅಬ್ದುರಾಚ್ಮನ್ ತಿಳಿಸಿದ್ದಾರೆ. ಈ ಬಗ್ಗೆ ತೈಲ ಮತ್ತು ಅನಿಲ ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕ ನಿಕೆ ವಿದ್ಯಾವತಿ ಮಾತನಾಡಿ ಸಂಪೂರ್ಣ ತನಿಖೆ ನಡೆಸಲಾಗುತ್ತದೆ.

ಮತ್ತೆ ಘಟನೆ ಮರುಕಳಿಸದಂತೆ ಕ್ರಮ ಕೈಗೊಳ್ಳಲಾಗುವುದು. ದೇಶದ ಇಂಧನ ಪೂರೈಕೆಯಲ್ಲಿ ಯಾವುದೇ ಕೊರತೆ ಇಲ್ಲ ಹತ್ತಿವಿರುವ ಟರ್ಮಿನಲ್‌ಗಳಿಂದ ಬ್ಯಾಕಪ್‌ಗಳ ಮೂಲಕ ಪೂರೈಸಲಾಗುತ್ತಿದೆ ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!