ಬರ್ಥ್ ಡೇ ಪಾರ್ಟಿ ನಡೆಯುತ್ತಿದ್ದ ಮನೆ ಮೇಲೆ ಗುಂಡಿನ ದಾಳಿ: ನಾಲ್ವರು ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಲಾಸ್ ಏಂಜಲಿಸ್‌ನ ಮನೆಯೊಂದರಲ್ಲಿ ನಡೆಯುತ್ತಿದ್ದ ಬರ್ಥಡೇ ಪಾರ್ಟಿಯಲ್ಲಿ ಗುಂಡಿನ ದಾಳಿಯಾಗಿದ್ದು, ನಾಲ್ವರು ಮೃತಪಟ್ಟಿದ್ದಾರೆ.

ಇಂಗ್ಲೆವುಡ್ ನಗರದ ಮನೆಯೊಂದರಲ್ಲಿ ಯುವತಿಯ ಬರ್ಥ್‌ಡೇ ಪಾರ್ಟಿ ನಡೆಯುತ್ತಿತ್ತು. ಈ ವೇಳೆ ಮೂರ್ನಾಲ್ಕು ಮಂದಿ ಗುಂಡಿನ ದಾಳಿ ನಡೆಸಿದ್ದು, ಬರ್ಥ್‌ಡೇ ಯುವತಿ, ಆಕೆಯ ಸಹೋದರಿ ಹಾಗೂ ಇಬ್ಬರು ಸ್ನೇಹಿತರನ್ನು ಗುಂಡಿಕ್ಕಿ ಕೊಲ್ಲಲಾಗಿದೆ.

ಇನ್ನೊಬ್ಬರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಇದೊಂದು ಉದ್ದೇಶಪೂರ್ವಕ ಕೃತ್ಯ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!