Tuesday, March 21, 2023

Latest Posts

ಗುಡಿಸಲಿಗೆ ಬೆಂಕಿ ತಗುಲಿ ವೃದ್ಧ ದಂಪತಿ ಸಜೀವ ದಹನ

ಹೊಸದಿಗಂತ ವರದಿ ವಿಜಯಪುರ :

ಗುಡಿಸಲಿಗೆ ಆಕಸ್ಮಿಕ ಬೆಂಕಿ ತಗುಲಿ ವೃದ್ಧ ದಂಪತಿ ಸಜೀವ ದಹನಗೊಂಡಿರುವ ಹೃದಯವಿದ್ರಾವಕ ಘಟನೆ ಜಿಲ್ಲೆಯ ಚಡಚಣ ಪಟ್ಟಣದ ಹೊರ ವಲಯದಲ್ಲಿ ಶನಿವಾರ ತಡರಾತ್ರಿ ನಡೆದಿದೆ.

ಇಲ್ಲಿನ ಕರೀಮಸಾಬ ಇಮಾಮಸಾಬ ಟಪಾಲ (82), ಸಾಜನಬಿ ಮರೀಮಸಾಬ ಟಪಾಲ (75) ಸಾವಿಗೀಡಾದ ದುರ್ದೈವಿ ದಂಪತಿ.

ಈ ದಂಪತಿ ಗುಡಿಸಿಲಿನಲ್ಲಿ ಮಲಗಿದ್ದ ವೇಳೆ ಚಿಮಣಿಯಿಂದ ಬೆಂಕಿ ಹೊತ್ತಿಕೊಂಡಿದ್ದು, ಈ ಅವಘಡದಲ್ಲಿ ವೃದ್ಧ ದಂಪತಿ ಸಜೀವ ದಹನವಾಗಿದ್ದಾರೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!