August 31, 2026
Monday, August 31, 2026
spot_img

ಮೈಸೂರಿನ ಕಾವೇರಿ ನರ್ಸಿಂಗ್ ಕಾಲೇಜಿನಲ್ಲಿ ಅಗ್ನಿ ಅವಘಡ: ಧಗಧಗನೆ ಹೊತ್ತಿ ಉರಿದ ಕಟ್ಟಡ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಾಂಸ್ಕೃತಿಕ ನಗರಿಯ ದೇವೇಗೌಡ ಸರ್ಕಲ್ ಬಳಿ ಇರುವ ಕಾವೇರಿ ನರ್ಸಿಂಗ್ ಕಾಲೇಜಿನಲ್ಲಿ ಇಂದು ಭೀಕರ ಅಗ್ನಿ ಅವಘಡ ಸಂಭವಿಸಿದೆ.

ಮಧ್ಯಾಹ್ನದ ವೇಳೆಗೆ ಕಾಲೇಜು ಕಟ್ಟಡದ ಮೇಲ್ಭಾಗದಲ್ಲಿ ಏಕಾಏಕಿ ಕಾಣಿಸಿಕೊಂಡ ಬೆಂಕಿ, ನೋಡನೋಡುತ್ತಿದ್ದಂತೆಯೇ ಇಡೀ ಮಹಡಿಯನ್ನು ಆವರಿಸಿಕೊಂಡಿದೆ.

ಬೆಂಕಿಯ ಕೆನ್ನಾಲಿಗೆಗೆ ಕಟ್ಟಡವು ಧಗಧಗನೆ ಹೊತ್ತಿ ಉರಿದಿದ್ದು, ದಟ್ಟವಾದ ಹೊಗೆಯಿಂದಾಗಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಪ್ರಾಥಮಿಕ ಮಾಹಿತಿಯ ಪ್ರಕಾರ, ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಈ ಅವಘಡಕ್ಕೆ ಪ್ರಮುಖ ಕಾರಣ ಎಂದು ತಿಳಿದುಬಂದಿದೆ.

ಅದೃಷ್ಟವಶಾತ್, ಸಕಾಲದಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಿರುವುದರಿಂದ ಪ್ರಾಣಾಪಾಯದ ಬಗ್ಗೆ ಸದ್ಯಕ್ಕೆ ಯಾವುದೇ ವರದಿಯಾಗಿಲ್ಲ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !