ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Friday, June 25, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಕೋವಿಡ್​ ಕೇಂದ್ರದಲ್ಲಿ ಅಗ್ನಿ ಅವಘಡ| ಇದು ರಾಷ್ಟ್ರ ಮಟ್ಟದ ಸುದ್ದಿಯಲ್ಲ, ರಾಜ್ಯ ಸರ್ಕಾರ ಆರ್ಥಿಕ ನೆರವು ನೀಡುತ್ತೆ!

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಮಹಾರಾಷ್ಟ್ರದ ಪಲ್ಘಾರ್​ ಜಿಲ್ಲೆಯ  ವಾಸೈನಲ್ಲಿರುವ ವಿರಾರ್ ವಿಜಯ ವಲ್ಲಭ ಕೋವಿಡ್​ ಕೇಂದ್ರದಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿ, 13 ಮಂದಿ ಸೋಂಕಿತರು ಸಜೀವ ದಹನವಾಗಿರುವ ಘಟನೆ ರಾಷ್ಟ್ರ ಮಟ್ಟದಲ್ಲಿ ಸುದ್ದಿಯಾಗಿದ್ದು, ಪ್ರಧಾನಿ ಮೋದಿ ಸೇರಿದಂತೆ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ.

ಈ ಕುರಿತು ಮಹಾರಾಷ್ಟ್ರ ಆರೋಗ್ಯ ಸಚಿವ ರಾಜೇಶ್ ಟೊಪೆ ಪ್ರತಿಕ್ರಿಯಿಸಿದ್ದು, ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ ಆಕ್ಸಿಜನ್, ರೆಮೆಡಿಸಿವಿರ್, ಲಸಿಕೆ ಕೊರತೆ ಬಗ್ಗೆ ಚರ್ಚಿಸುತ್ತೇವೆ. ಹಾಗೆಯೇ ವಿರಾರ್ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ಅವಘಡ ಬಗ್ಗೆಯೂ ಮಾತನಾಡುತ್ತೇವೆ. ಹಾಗೆಂದು ಇದು ರಾಷ್ಟ್ರ ಮಟ್ಟದ ಸುದ್ದಿಯಲ್ಲ ಎಂದಿದ್ದಾರೆ.

ಅಗ್ನಿ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಆರ್ಥಿಕ ನೆರವು ನೀಡುವುದಾಗಿ  ಸಚಿವ ರಾಜೇಶ್ ಟೊಪೆ ತಿಳಿಸಿದ್ದಾರೆ.

ಅಗ್ನಿ ಅವಘಡದಲ್ಲಿ ಗಾಯಗೊಂಡಿರುವ ಮತ್ತು ಇತರ ಸುರಕ್ಷಿತ ರೋಗಿಗಳನ್ನು ಹತ್ತಿರದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.  ಎಸಿ ಶಾರ್ಟ್​ ಸೆರ್ಕ್ಯೂಟ್​ನಿಂದ ಬೆಂಕಿ ಹೊತ್ತಿಕೊಂಡಿರಬಹುದೆಂದು ಊಹಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss