ಮಡಿಕೇರಿಯ ದಾಸ್ತಾನು ಮಳಿಗೆಯಲ್ಲಿ ಬೆಂಕಿ: ಲಕ್ಷಾಂತರ ರೂ.ಮೌಲ್ಯದ ಪೀಠೋಪಕರಣ ಭಸ್ಮ

ಹೊಸದಿಗಂತ ವರದಿ ಮಡಿಕೇರಿ:

ನಗರದ ಕೈಗಾರಿಕಾ ಬಡಾವಣೆಯಲ್ಲಿರುವ ಪೀಠೋಪಕರಣಗಳ ದಾಸ್ತಾನು ಮಳಿಗೆಯಲ್ಲಿ ಸೋಮವಾರ ನಸುಕಿನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಲಕ್ಷಾಂತರ ರೂ.‌ಮೌಲ್ಯದ ಪೀಠೋಪಕರಣಗಳು ಹಾಗೂ ಮರ ಉರಿದು ಭಸ್ಮವಾಗಿದೆ.

ಮಡಿಕೇರಿಯ ಕೈಗಾರಿಕಾ ಬಡಾವಣೆಯಲ್ಲಿರುವ ಪ್ರಶಾಂತ್ ಫರ್ನಿಚರ್’ಗೆ ಸೇರಿದ ದಾಸ್ತಾನು ಮಳಿಗೆಯಲ್ಲಿ ಸೋಮವಾರ ನಸುಕಿನ ವೇಳೆ ಭಾರೀ ಬೆಂಕಿ ಕಾಣಿಸಿಕೊಂಡಿದ್ದು, ಸತತ 8 ಗಂಟೆಗಳಿಂದ ಕಾರ್ಯಾಚರಣೆ ನಡೆಸಿದರೂ ಬೆಂಕಿ ಇನ್ನೂ ನಿಯಂತ್ರಣಕ್ಕೆ ಬಂದಿಲ್ಲ.

ಮಡಿಕೇರಿ, ಕುಶಾಲನಗರ ಹಾಗೂ ಗೋಣಿಕೊಪ್ಪದಿಂದ ಆಗಮಿಸಿರುವ ಒಟ್ಟು ನಾಲ್ಕು ಅಗ್ನಿಶಾಮಕ ವಾಹನಗಳು ನಿರಂತವಾಗಿ ಕಾರ್ಯಾಚರಣೆ ನಡೆಸುತ್ತಿದ್ದು, ಇದುವರೆಗೆ 30 ಲೋಡ್’ಗೂ ಅಧಿಕ ನೀರು ಖಾಲಿಯಾದರೂ ಬೆಂಕಿ ಉರಿಯುತ್ತಲೇ ಇದೆ.

ಸ್ಥಳಕ್ಕಾಗಮಿಸಿರುವ ಪೊಲೀಸರು ಕೈಗಾರಿಕಾ ಬಡಾವಣೆ- ಕೊಹಿನೂರ್ ಜಂಕ್ಷನ್ ಸಂಪರ್ಕ ರಸ್ತೆಯಲ್ಲಿ ಸಂಚಾರವನ್ನು ಬಂದ್ ಮಾಡಿದ್ದು, ಅಗ್ನಿಶಾಮಕ ವಾಹನಗಳಿಗಷ್ಟೇ ಅವಕಾಶ ಕಲ್ಪಿಸಿದ್ದಾರೆ.
ನೀರು ತುಂಬಿಕೊಂಡ ಅಗ್ನಿಶಾಮಕ ವಾಹನಗಳು ಒಂದರ ಮೇಲೊಂದರಂತೆ ಬರುತ್ತಿದ್ದು, ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸಪಡುತ್ತಿದ್ದಾರೆ. ಮರದ ವಸ್ತುಗಳಿಗೆ ತಗುಲಿರುವ ಬೆಂಕಿಯನ್ನು ನಂದಿಸಲು ಸಾಧ್ಯವಾಗುತ್ತಿಲ್ಲ ಎಂದು ಅಗ್ನಿಶಾಮಕ ದಳದ ಸಿಬ್ಬಂದಿಯೊಬ್ಬರು ತಿಳಿಸಿದರು.

ಮಡಿಕೇರಿ, ಗೋಣಿಕೊಪ್ಪಲು, ಕುಶಾಲನಗರದಿಂದಲೂ ಅಗ್ನಿಶಾಮಕ ಸಿಬ್ಬಂದಿ ಬಂದು ನಾಲ್ಕು ವಾಹನಗಳಲ್ಲಿ ಬೆಂಕಿ ನಂದಿಸಲು ಯತ್ನಿಸಲಾಗುತ್ತಿದ್ದರೂ ಬೆಂಕಿ ನಿಯಂತ್ರಣಕ್ಕೆ ಬರುತ್ತಿಲ್ಲ ಎಂದು ಅವರು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!