July 9, 2026
Thursday, July 9, 2026
spot_img

ಶಾರ್ಟ್ ಸರ್ಕ್ಯೂಟ್‌ನಿಂದ ಸಾಮೂಹಿಕ ವಿವಾಹ ವೇದಿಕೆಯಲ್ಲಿ ಬೆಂಕಿ: ಡಿಸಿಎಂ ಜಸ್ಟ್ ಮಿಸ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ನಡೆದ 151 ಜೋಡಿಗಳ ಸಾಮೂಹಿಕ ವಿವಾಹ ಕಾರ್ಯಕ್ರಮದ ಸಂಭ್ರಮದ ನಡುವೆ ಕ್ಷಣಿಕ ಆತಂಕದ ಘಟನೆ ನಡೆದಿದೆ.

ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವೇದಿಕೆ ಬಳಿ ತೆರಳುತ್ತಿದ್ದ ವೇಳೆ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡು ಕೆಲಕಾಲ ಗೊಂದಲ ಉಂಟಾಯಿತು.

ಇದನ್ನೂ ಓದಿ:

ಭಾರಿ ಸಿದ್ಧತೆಯೊಂದಿಗೆ ನಿರ್ಮಿಸಿದ್ದ ವೇದಿಕೆಯಲ್ಲಿ ಹಲವು ಗಣ್ಯರ ಸಮ್ಮುಖದಲ್ಲಿ ವಿವಾಹ ಕಾರ್ಯಕ್ರಮ ನಡೆಯುತ್ತಿತ್ತು. ನವಜೋಡಿಗಳಿಗೆ ಆಶೀರ್ವಾದ ನೀಡಿ ವೇದಿಕೆಯಿಂದ ಇಳಿಯುವ ಸಮಯದಲ್ಲಿ ಮೆಟ್ಟಿಲುಗಳ ಸಮೀಪ ವಿದ್ಯುತ್ ತಾಂತ್ರಿಕ ದೋಷದಿಂದ ಕಿಡಿ ಹೊತ್ತಿಕೊಂಡಿದೆ.

ತಕ್ಷಣ ಕಾರ್ಯಪ್ರವೃತ್ತರಾದ ಭದ್ರತಾ ಸಿಬ್ಬಂದಿ ಡಿಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಸಚಿವ ಈಶ್ವರ ಖಂಡ್ರೆ ಅವರನ್ನು ಸುರಕ್ಷಿತ ಸ್ಥಳಕ್ಕೆ ಕರೆದೊಯ್ದರು. ಬೆಂಕಿಯನ್ನು ಕೂಡಲೇ ನಿಯಂತ್ರಣಕ್ಕೆ ತರಲಾಗಿದ್ದು, ಯಾವುದೇ ದೊಡ್ಡ ಅನಾಹುತ ಸಂಭವಿಸಿಲ್ಲ.

ಪ್ರಾಥಮಿಕ ತನಿಖೆಯಲ್ಲಿ ವಿದ್ಯುತ್ ದೋಷವೇ ಘಟನೆಗೆ ಕಾರಣ ಎಂದು ತಿಳಿದುಬಂದಿದ್ದು, ಕಾರ್ಯಕ್ರಮ ನಂತರ ಪರಿಸ್ಥಿತಿ ಸಹಜಗೊಂಡಿತು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !