ಬಹುಮಹಡಿ ಕಟ್ಟಡದಲ್ಲಿ ಬೆಂಕಿ: 6ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ದೌಡು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ದೆಹಲಿಯ ಶಕರ್‌ಪುರ ಪ್ರದೇಶದಲ್ಲಿ ಬಹುಮಹಡಿ ಕಟ್ಟಡದಲ್ಲಿ ಸೋಮವಾರ ಬೆಳ್ಳಂ ಬೆಳಗ್ಗೆ ಬೆಂಕಿ ಕಾಣಿಸಿಕೊಂಡಿದೆ. ಮೂಲಗಳ ಪ್ರಕಾರ ಕಟ್ಟಡದ ಐದನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಆರು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿವೆ. ಬೆಂಕಿ ನಂದಿಸುವ ಕಾರ್ಯ ಇನ್ನೂ ಪ್ರಗತಿಯಲ್ಲಿದ್ದು, ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಆಸ್ತಿ ಹಾನಿ, ಪ್ರಾಣ ಹಾನಿ ಬಗ್ಗೆ ಇದುವರೆಗೂ ವರದಿಯಾಗಿಲ್ಲ.

ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!