March 16, 2026
Monday, March 16, 2026
spot_img

ಒಡಿಶಾ ಆಸ್ಪತ್ರೆಯಲ್ಲಿ ಅಗ್ನಿ ಅವಘಡ: 10 ರೋಗಿಗಳ ದುರಂತ ಅಂತ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಒಡಿಶಾದ ಕಟಕ್‌ನಲ್ಲಿರುವ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಐಸಿಯು ವಿಭಾಗದಲ್ಲಿ ಸೋಮವಾರ ಮುಂಜಾನೆ ಸಂಭವಿಸಿದ ಅಗ್ನಿ ಅವಘಡದಲ್ಲಿ 10 ರೋಗಿಗಳು ಮೃತಪಟ್ಟಿದ್ದಾರೆ.

ಮಧ್ಯರಾತ್ರಿ ಸುಮಾರು 2.30ರ ವೇಳೆಗೆ ಐಸಿಯು ವಿಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಆ ಸಮಯದಲ್ಲಿ ಗಂಭೀರ ಸ್ಥಿತಿಯಲ್ಲಿದ್ದ ಹಲವಾರು ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದರು. ಬೆಂಕಿ ಕಾಣಿಸಿಕೊಂಡ ತಕ್ಷಣ ಅಗ್ನಿಶಾಮಕ ದಳದ ಹಲವು ವಾಹನಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿವೆ.

ಈ ದುರ್ಘಟನೆಯ ವೇಳೆ ರೋಗಿಗಳನ್ನು ರಕ್ಷಿಸಲು ಮುಂದಾದ ಆಸ್ಪತ್ರೆಯ ಕನಿಷ್ಠ 11 ಸಿಬ್ಬಂದಿಗೆ ಸುಟ್ಟ ಗಾಯಗಳಾಗಿವೆ.

ಇದನ್ನೂ ಓದಿ:

ಅವಘಡದ ಬಳಿಕ ಐಸಿಯುವಿನಲ್ಲಿ ಇದ್ದ ಒಟ್ಟು 23 ರೋಗಿಗಳನ್ನು ತುರ್ತುವಾಗಿ ಆಸ್ಪತ್ರೆಯ ಇತರ ವಾರ್ಡ್‌ಗಳಿಗೆ ಸ್ಥಳಾಂತರಿಸಲಾಯಿತು. ಸ್ಥಳಾಂತರದ ವೇಳೆ ಗಂಭೀರ ಸ್ಥಿತಿಯಲ್ಲಿದ್ದ ಏಳು ರೋಗಿಗಳು ಪ್ರಾಣ ಕಳೆದುಕೊಂಡರೆ, ನಂತರ ಇನ್ನೂ ಮೂವರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 25 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಘೋಷಿಸಿದ್ದಾರೆ. ಘಟನೆಯ ನಿಖರ ಕಾರಣ ತಿಳಿಯಲು ನ್ಯಾಯಾಂಗ ತನಿಖೆಗೆ ಆದೇಶಿಸಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !