ಹೊಸ ದಿಗಂತ ವರದಿ ವಿಜಯಪುರ:
ನಗರದ ಬಸ್ ನಿಲ್ದಾಣ ಬಳಿ ಇರುವ ಅನುಗ್ರಹ ಕಣ್ಣಿನ ಆಸ್ಪತ್ರೆ ಕೊಠಡಿಯಲ್ಲಿ ಮಂಗಳವಾರ ಬೆಳಗ್ಗೆ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರುವ ಘಟನೆ ನಡೆದಿದೆ.
ಗ್ರಹಣದ ದಿನವೇ ಆಸ್ಪತ್ರೆಯ ಕೊಠಡಿಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಕೊಠಡಿಯಲ್ಲಿದ್ದ ಮಹತ್ವದ ದಾಖಲೆಗಳು ಬೆಂಕಿಗಾಹುತಿ ಆಗಿವೆ. ಯಾವುದೇ ಪ್ರಾಣ ಹಾನಿಯಾಗಿಲ್ಲ.
ಸುದ್ದಿ ತಿಳಿದ ಅಗ್ನಿ ಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯಕ್ಕೆ ಮುಂದಾಗುತ್ತಿದ್ದಂತೆ, ದಟ್ಟ ಹೊಗೆ ಆಕಾಶದೆತ್ತರ ಹರಡಿರುವುದು ಕಂಡು ಜನರು ಆತಂಕಗೊಳ್ಳುವಂತಾಗಿತ್ತು.
ಗಾಂಧಿಚೌಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.