Friday, June 2, 2023

Latest Posts

ಬಟ್ಟೆ ಅಂಗಡಿಯಲ್ಲಿ ಅಗ್ನಿ ದುರಂತ : ದಂಪತಿ ಸಜೀವ ದಹನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ದಂಪತಿ ಸಜೀವ ದಹನಗೊಂಡ ಘಟನೆ ಯಾದಗಿರಿ ತಾಲೂಕಿನ ಸೈದಾಪುರ ಪಟ್ಟಣದಲ್ಲಿ ನಡೆದಿದೆ. ಈ ದುರಂತದಲ್ಲಿ ಮನೆಯಲ್ಲಿದ್ದ ಪತಿ ಕೆ.ಬಿ.ರಾಘವೇಂದ್ರ (39) ಮತ್ತು ಪತ್ನಿ ಶಿಲ್ಪಾ ರಾಘವೇಂದ್ರ (32) ಮೃತಪಟ್ಟಿದ್ದಾರೆ.

ಬಟ್ಟೆ ಅಂಗಡಿ ವ್ಯಾಪಾರಿಗಳಾಗಿದ್ದ ಇವರು ಮನೆಯ ಮೂರು ಮಹಡಿಗಳ ಪೈಕಿ ಎರಡರಲ್ಲಿ ಬಟ್ಟೆ ವ್ಯಾಪಾರ, ಒಂದರಲ್ಲಿ ವಾಸವಿದ್ದರು.

ಎಂದಿನಂತೆ ವ್ಯವಹಾರ ಮುಗಿಸಿಕೊಂಡು ಮನೆಯಲ್ಲಿ ಮಲಗಿದ್ದಾಗ ಭಾನುವಾರ ತಡರಾತ್ರಿ ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ನಿಂದ ಮನೆ ಮತ್ತು ಬಟ್ಟೆ ಅಂಗಡಿಯಲ್ಲಿ ಬೆಂಕಿ ಹೊತ್ತಿಕೊಂಡಿದೆ.

ಸೋಮವಾರ ಬೆಳಗಿನ ಜಾವ 5 ಗಂಟೆಗೆ ಸಾರ್ವಜನಿಕರು ಈ ಘಟನೆಯನ್ನು ಗಮನಿಸಿದ್ದು, ಅಂಗಡಿಯಲ್ಲಿ ಮಾರಾಟಕ್ಕಿಟ್ಟಿದ್ದ ಬಟ್ಟೆಗಳು ಸಂಪೂರ್ಣವಾಗಿ ಸುಟ್ಟು ಬೂದಿಯಾಗಿರುವುದು ಕಂಡು ಬಂದಿದೆ.

ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!