ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೆಡಿಸಿನ್ ಕೆಮಿಕಲ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಲಕ್ಷಾಂತರ ಮೌಲ್ಯದ ವಸ್ತುಗಳು ಹಾನಿಯಾಗಿರುವ ಘಟನೆ ತುಮಕೂರಿನ ವಸಂತನರಸಾಪುರದಲ್ಲಿ ನಡೆದಿದೆ.
ವಸಂತನರಸಾಪುರದ ಕೈಗಾರಿಕಾ ಪ್ರದೇಶದಲ್ಲಿರುವ ವೀರೇಶ್ ಇಂಡ್ರಸ್ಟ್ರಿಯಲ್ ಫಾರ್ಮಾಸ್ಯೂಟಿಕಲ್ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿಯ ಕೆನ್ನಾಲಿಗೆಗೆ ಕಾರ್ಖಾನೆಯು ಹೊತ್ತಿ ಉರಿದಿದೆ. ಇದರಿಂದ ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ.
ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳು ಧಾವಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.
ಸದ್ಯ ಯಾವುದೇ ಸಾವು ನೋವು ಸಂಭವಿಸಿರುವ ಬಗ್ಗೆ ವರದಿಯಾಗಿಲ್ಲ.