ಮುಂಬೈನ ಸಿದ್ಧಿವಿನಾಯಕ್ ಮೆಟ್ರೋ ನಿಲ್ದಾಣದ ಮೆಟ್ರೋ ಶೆಡ್‌ನಲ್ಲಿ ಅಗ್ನಿ ದುರಂತ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಮುಂಬೈನ್ ದಾದರ್​ನಲ್ಲಿರುವ ಸಿದ್ಧಿವಿನಾಯಕ ಮೆಟ್ರೋ ನಿಲ್ದಾಣದ ಮೆಟ್ರೋ ಶೆಡ್​ನಲ್ಲಿ ಮಂಗಳವಾರ ಬೆಂಕಿ ಕಾಣಿಸಿಕೊಂಡಿದೆ. ಅಗ್ನಿ ಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.

ಇಂದು ಬೆಳಗ್ಗೆ 8.46ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, 8.48 ಕ್ಕೆ ಅದನ್ನು ನಂದಿಸಲಾಯಿತು ಎಂದು ಬಿಎಂಸಿ ಅಧಿಕಾರಿ ತಿಳಿಸಿದ್ದಾರೆ.

ಪ್ರಾಥಮಿಕ ಮಾಹಿತಿ ಪ್ರಕಾರ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ. ಯಾವುದೇ ಗಾಯಗಳಾಗಿಲ್ಲ ಎಂದು ಬಿಎಂಸಿ ಅಗ್ನಿಶಾಮಕ ದಳ ಹೇಳಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!