ಹೊಸದಿಗಂತ ಡಿಜಿಟಲ್ ಡೆಸ್ಕ್:
3-ಸ್ಟಾರ್ ಹೋಟೆಲ್‌ಗೆ ಬೆಂಕಿ ಬಿದ್ದಿರುವ ಘಟನೆ ಉತ್ತರ ಪ್ರದೇಶದ ವಾರಣಾಸಿಯಲ್ಲಿ ನಡೆದಿದೆ. ಶ್ರೀನಗರ ಕಾಲೋನಿಯಲ್ಲಿರುವ ತ್ರಿತಾರಾ ಹೋಟೆಲ್‌ನಲ್ಲಿ ಮಂಗಳವಾರ ತಡರಾತ್ರಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ ಹಾನಿಯಾಗಿದೆ ಎಂದು ಹೊಟೇಲ್ ಮ್ಯಾನೇಜ್‌ಮೆಂಟ್ ಖಚಿತಪಡಿಸಿದೆ.
ಬೆಂಕಿ ಅವಘಡದಲ್ಲಿ ಯಾವುದೇ ಪ್ರಾಣಹಾನಿ ಅಥವಾ ಗಾಯಗಳಾಗಿರುವ ಬಗ್ಗೆ ವರದಿಯಾಗಿಲ್ಲ. ಇನ್ನೂ ದುರಂತಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಮಾಹಿತಿ ಪಡೆದ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕಾಗಮಿಸಿ ಕಾರ್ಯಾಚರಣೆ ಆರಂಭಿಸಿದ್ದಾರೆ.
ಪ್ರಸ್ತುತ ಸ್ಥಳದಲ್ಲಿ ಅಗ್ನಿಶಾಮಕ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದು, ಬೆಂಕಿಯನ್ನು ಹತೋಟಿಗೆ ತರುವ ಪ್ರಯತ್ನ ನಡೆಯುತ್ತಿದೆ. ಅಗ್ನಿಶಾಮಕ ವಾಹನಗಳು ಒಂದು ಗಂಟೆ ತಡವಾಗಿ ಆಗಮಿಸಿದ್ದಕ್ಕೆ ಬೆಂಕಿ ಇನ್ನಷ್ಟು ವ್ಯಾಪಿಸಿದೆ ಎಂದು ಸ್ಥಳೀಯರು ತಿಳಿಸಿದರು.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ…