ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಷ್ಟ್ರ ರಾಜಧಾನಿ ದೆಹಲಿಯ ಬಾಲಕಿಯರ ವಸತಿ ನಿಲಯದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ದೆಹಲಿಯ ಮುಖರ್ಜಿ ನಗರದಲ್ಲಿ ಮೂರು ಅಂತಸ್ತಿನ ಪೇಯಿಂಗ್ ಗೆಸ್ಟ್ ಸೌಲಭ್ಯದಲ್ಲಿ ಬುಧವಾರ ಸಂಜೆ ಬೆಂಕಿ ಕಾಣಿಸಿಕೊಂಡಿದೆ. ಮಾಹಿತಿ ಪಡೆದ ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ 35 ಬಾಲಕಿಯರನ್ನು ರಕ್ಷಿಸಿದ್ದಾರೆ.
20 ಅಗ್ನಿಶಾಮಕ ವಾಹನಗಳು ಸತತ ಒಂದೂವರೆ ಗಂಟೆಗಳ ಕಾಲ ಪರಿಹಾರ ಕಾರ್ಯಗಳ ಮೂಲಕ ಎಲ್ಲ ಬಾಲಕಿಯರನ್ನು ಸುರಕ್ಷಿತವಾಗಿ ಹೊರತರಲಾಯಿತು. ಮೆಟ್ಟಿಲುಗಳಿಗೆ ಅಳವಡಿಸಲಾದ ವಿದ್ಯುತ್ ಮೀಟರ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಮೇಲಿನ ಮಹಡಿಗಳಿಗೆ ವ್ಯಾಪಿಸಿದೆ.
ದೆಹಲಿ ಅಗ್ನಿಶಾಮಕ ಸೇವಾ ನಿರ್ದೇಶಕ ಅತುಲ್ ಗಾರ್ಗ್ ಮಾತನಾಡಿ, ಕೆಲವು ಬಾಲಕಿಯರನ್ನು ವೈದ್ಯಕೀಯ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅಗ್ನಿ ಅವಘಡ ಸಂಭವಿಸಿದ ಸ್ಥಳದಲ್ಲಿ ಅಪಾರ ಜನಸ್ತೋಮ ನೆರೆದಿತ್ತು. ಪ್ರಾಥಮಿಕ ಅಂದಾಜಿನ ಪ್ರಕಾರ, ಕಟ್ಟಡದಲ್ಲಿ ಅಗ್ನಿ ಸುರಕ್ಷತಾ ಕ್ರಮಗಳ ಕೊರತೆಯಿದೆ ಎಂದರು.