Monday, October 2, 2023

Latest Posts

ಅಲಪ್ಪುಳ-ಕಣ್ಣೂರು ಎಕ್ಸ್‌ಪ್ರೆಸ್‌ ರೈಲಿನಲ್ಲಿ ಅಗ್ನಿ ಅವಘಡ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರೈಲ್ವೆ ನಿಲ್ದಾಣದಲ್ಲಿ ನಿಂತಿದ್ದ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ಕೇರಳದ ಕಣ್ಣೂರಿನಲ್ಲಿ ನಡೆದಿದೆ.

ಗುರುವಾರ ಮುಂಜಾನೆ ಅಲಪ್ಪುಳ-ಕಣ್ಣೂರು ಎಕ್ಸಿಕ್ಯೂಟಿವ್ ಎಕ್ಸ್‌ಪ್ರೆಸ್ ರೈಲು ಕಣ್ಣೂರು ಸ್ಟೇಷನ್‌ನಲ್ಲಿ ನಿಂತಿದ್ದ ವೇಳೆ ರೈಲಿನ ಒಂದು ಬೋಗಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸದ್ಯ ಯಾವುದೇ ಅಪಾಯ ಸಂಭವಿಸಿಲ್ಲ ಎಂದು ವರದಿ ಹೇಳಿದೆ.

ಘಟನೆ ಬಗ್ಗೆ ಮಾಹಿತಿ ಪಡೆದ ಅಗ್ನಿಶಾಮಕ ದಳದವರು ಬೆಂಕಿಯನ್ನು ನಂದಿಸಿದ್ದಾರೆ. ಬೆಂಕಿ ಕಾಣಿಸಿಕೊಂಡ ಪರಿಣಾಮ ರೈಲಿನ ಇತರ ಬೋಗಿಗಳನ್ನು ಬೇರ್ಪಡಿಸಲಾಗಿದೆ.

ಈ ಕುರಿತು ಪೊಲೀಸರು ಪಕ್ಕದಲ್ಲಿದ್ದ ಸಿಸಿಟಿವಿಯನ್ನು ಪರಿಶೀಲನೆ ಮಾಡಿದ್ದು, ಅಪರಿಚಿತ ವ್ಯಕ್ತಿಯೊಬ್ಬ ರೈಲಿನೊಳಗೆ ಪ್ರವೇಶಿಸಿದ ಬಳಿಕ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸದ್ಯ ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!