ವಾರಾಣಸಿಯ ಆತ್ಮವಿಶ್ವೇಶ್ವರ ದೇವಾಲಯದಲ್ಲಿ ಬೆಂಕಿ: 7 ಮಂದಿ ಸಜೀವ ದಹನ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಉತ್ತರ ಪ್ರದೇಶದ ವಾರಾಣಸಿಯ ಆತ್ಮವಿಶ್ವೇಶ್ವರ ದೇವಾಲಯದಲ್ಲಿ ಭೀಕರ ಬೆಂಕಿ ಅವಘಡ ಸಂಭವಿಸಿ, ಏಳು ಮಂದಿ ಸಜೀವ ದಹನವಾದ ಘಟನೆ ನಡೆದಿದೆ. ಶನಿವಾರ ರಾತ್ರಿ (ಆಗಸ್ಟ್ 9) ಚೌಕ್ ಪ್ರದೇಶದಲ್ಲಿರುವ ಈ ದೇವಾಲಯದಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ.

ಸ್ಥಳೀಯ ಮೂಲಗಳ ಪ್ರಕಾರ, ದೇವಾಲಯವನ್ನು ಅಮರನಾಥ ದೇವಾಲಯದ ಮಾದರಿಯಲ್ಲಿ ಅಲಂಕರಿಸಲಾಗಿತ್ತು. ಹಿಮದ ಆಕೃತಿಯನ್ನು ಹತ್ತಿಯಿಂದ ತಯಾರಿಸಿ ವಿವಿಧ ಕಡೆಗಳಲ್ಲಿ ಅಳವಡಿಸಲಾಗಿತ್ತು. ಆರತಿ ಕಾರ್ಯಕ್ರಮ ಆರಂಭವಾದ ಸಮಯದಲ್ಲಿ ಹತ್ತಿಗೆ ಬೆಂಕಿ ಹೊತ್ತಿಕೊಂಡು, ಅದು ವೇಗವಾಗಿ ಹರಡಿತು. ಈ ವೇಳೆ ಗೊಂದಲದಿಂದ ಕಾಲ್ತುಳಿತವೂ ಸಂಭವಿಸಿ, ಹಲವರು ಬೆಂಕಿಯಲ್ಲಿ ಸಿಲುಕಿದರು.

ಗಾಯಾಳುಗಳನ್ನು ತಕ್ಷಣವೇ ಮಹಮೂರ್‌ಗಂಜ್‌ನ ಜಿಎಸ್ ಆಸ್ಪತ್ರೆಗೆ ಸಾಗಿಸಲಾಗಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ. ಪ್ರಾಥಮಿಕ ತನಿಖೆಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ ಸಂಭವಿಸಿದ ಸಾಧ್ಯತೆ ವ್ಯಕ್ತವಾಗಿದೆ.

ಘಟನೆಯ ನಂತರ ಸ್ಥಳಕ್ಕೆ ಸ್ಥಳೀಯ ಜನಪ್ರತಿನಿಧಿಗಳು, ಪೊಲೀಸ್ ಅಧಿಕಾರಿಗಳು ಮತ್ತು ಆಡಳಿತ ವರ್ಗ ಧಾವಿಸಿ, ರಕ್ಷಣಾ ಕಾರ್ಯಗಳಲ್ಲಿ ತೊಡಗಿದರು. ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ, ಅಪಘಾತದ ಬಗ್ಗೆ ದುಃಖ ವ್ಯಕ್ತಪಡಿಸಿ, ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಕಾಶಿ ವಿಶ್ವನಾಥನಿಗೆ ಪ್ರಾರ್ಥನೆ ಸಲ್ಲಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!