ಮಹಾರಾಷ್ಟ್ರದ ಥಾಣೆಯಲ್ಲಿ ಬೆಂಕಿ ಅವಘಡ : ಮಗು ಸೇರಿದಂತೆ 13 ಜನರ ರಕ್ಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಮಹಾರಾಷ್ಟ್ರದ ಥಾಣೆಯ ನೌಪಾದಾ ಪ್ರದೇಶದಲ್ಲಿರುವ ಗುರುಪ್ರೇರಣಾ ಕಟ್ಟಡದ ವಿದ್ಯುತ್ ಮೀಟರ್ ಬಾಕ್ಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಎರಡು ವರ್ಷದ ಮಗು ಸೇರಿದಂತೆ 13 ಜನರನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಚರೈ ಪ್ರದೇಶದ ಕಟ್ಟಡದಲ್ಲಿ ಬೆಳಿಗ್ಗೆ 7.30 ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಐದು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ಹತೋಟಿಗೆ ತರಲಾಗಿದೆ. ಈ ವೇಳೆ ಯಾರಿಗೂ ತೊಂದರೆಯಾಗಿಲ್ಲ ಎಂದು ಥಾಣೆ ಮುನ್ಸಿಪಲ್ ಕಾರ್ಪೊರೇಶನ್‌ನ ಪ್ರಾದೇಶಿಕ ವಿಪತ್ತು ನಿರ್ವಹಣಾ ಕೋಶ (ಆರ್‌ಡಿಎಂಸಿ) ಮುಖ್ಯಸ್ಥ ಅವಿನಾಶ್ ಸಾವಂತ್ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!