ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರದ ಅಮರಾವತಿಯಲ್ಲಿರುವ ಸೆಂಟ್ರಲ್ ಬ್ಯಾಂಕ್ ಶಾಖಾ ಕಚೇರಿಯಲ್ಲಿ ಭಾರಿ ಅವಘಡ ಸಂಬವಿಸಿದೆ ಲಕ್ಷಾಂತರ ರೂಪಾಯಿ ನಗದು ಮತ್ತು ದಾಖಲೆಗಳು ಸುಟ್ಟು ಭಸ್ಮವಾಗಿದೆ ಎನ್ನಲಾಗಿದೆ.
ಬ್ಯಾಂಕ್ ತೆರೆದ ಸ್ವಲ್ಪ ಸಮಯದ ನಂತರ ಬ್ಯಾಂಕಿನಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ. ಬೆಂಕಿ ಹೊತ್ತಿಕೊಂಡ ತಕ್ಷಣ, ಬ್ಯಾಂಕ್ ಸಿಬ್ಬಂದಿ ಭಯಭೀತರಾಗಿ ಹೊರಗೆ ಓಡಿಹೋಗಿದ್ದಾರೆ, ಈ ಅವಘಡದಲ್ಲಿ ಯಾವುದೇ ಜೀವ ಹಾನಿ ಸಂಭವಿಸಿಲ್ಲ ಎಂದು ವರದಿಯಾಗಿದೆ.