ರಾಜೀವ್‌ ಗಾಂಧಿ ಸರ್ಕಾರಿ ಆಸ್ಪತ್ರೆಯಲ್ಲಿ ಬೆಂಕಿ ಅವಘಡ: ರೋಗಿಗಳು ಸೇಫ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ತಮಿಳುನಾಡಿನ ಚೆನ್ನೈನಲ್ಲಿರುವ ರಾಜೀವ್ ಗಾಂಧಿ ಸರ್ಕಾರಿ ಆಸ್ಪತ್ರೆಯಲ್ಲಿ ಇಂದು ಬೆಳಗ್ಗೆ ಅಗ್ನಿ ಅನಾಹುತ ಸಂಭವಿಸಿದೆ. ಆಸ್ಪತ್ರೆ ಬಳಿ ಅಗ್ನಿಶಾಮಕ ದಳ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ ಮುಂದುವರೆದಿದೆ.

ಎಲ್ಲಾ ರೋಗಿಗಳನ್ನು ಆಸ್ಪತ್ರೆಯಿಂದ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ. ಹಳೆಯ ಕಟ್ಟಡವೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಹೊಸ ಮೂರು ಬ್ಲಾಕ್‌ಗಳು ಸುರಕ್ಷಿತವಾಗಿವೆ. ಇಲ್ಲಿಯವರೆಗೆ ಯಾವುದೇ ಸಾವು-ನೋವುಗಳ ವರದಿಯಾಗಿಲ್ಲ ಎಂದು ವೈದ್ಯಕೀಯ ಪ್ರಧಾನ ಕಾರ್ಯದರ್ಶಿ, ಡಾ. ಜೆ.ರಾಧಾಕೃಷ್ಣನ್ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!