Friday, March 24, 2023

Latest Posts

ದೆಹಲಿಯ ಕಾರ್ಖಾನೆಯೊಂದರಲ್ಲಿ ಬೆಂಕಿ ಅವಘಡ: 27ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ದೌಡು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ದೆಹಲಿಯ ಕಾರಂಪುರದ ಮೋತಿ ನಗರ ಪೊಲೀಸ್ ಠಾಣೆ ಬಳಿಯ ಕಾರ್ಖಾನೆಯೊಂದರಲ್ಲಿ ಭಾನುವಾರ ತಡರಾತ್ರಿ ಬೆಂಕಿ ಕಾಣಿಸಿಕೊಂಡಿದ್ದು, ತೀವ್ರತೆ ಹೆಚ್ಚಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ 27 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಂದಿಸುವಲ್ಲಿ ನಿರತರಾಗಿದ್ದಾರೆ.

ಘಟನೆಯ ಕುರಿತು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

ಶನಿವಾರ ಮುಂಜಾನೆ, ದೆಹಲಿಯ ಕರೋಲ್ ಬಾಗ್ ಪ್ರದೇಶದಲ್ಲಿರುವ ಪಂಜಾಬ್ ನ್ಯಾಷನಲ್ ಬ್ಯಾಂಕ್ (PNB) ನಲ್ಲಿಯೂ ಬೆಂಕಿ ಕಾಣಿಸಿಕೊಂಡಿತು. ಬೆಂಕಿಯ ಸುದ್ದಿ ತಿಳಿಯುತ್ತಿದ್ದಂತೆ 16 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ಹತೋಟಿಗೆ ತಂದಿವೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!