September 30, 2026
Wednesday, September 30, 2026
spot_img

ಬೆಂಗಳೂರಿನ ಪ್ಲಾಸ್ಟಿಕ್‌ ಗೋಡೌನ್‌ಗೆ ಬೆಂಕಿ: ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಭಸ್ಮ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಪ್ಲಾಸ್ಟಿಕ್ ಗೋಡೌನ್‌ಗೆ ಬೆಂಕಿ ತಗುಲಿ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿರುವ ಘಟನೆ ಬನ್ನೇರುಘಟ್ಟ ರಸ್ತೆಯ ದೊಡ್ಡಕಮ್ಮನಹಳ್ಳಿಯಲ್ಲಿ ನಡೆದಿದೆ.

ಶಾರ್ಟ್ ಸರ್ಕ್ಯೂಟ್‌ನಿಂದ ಸೋಮವಾರ ಮಧ್ಯರಾತ್ರಿ ಈ ಘಟನೆ ನಡೆದಿದೆ. ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ನಡೆಸುತ್ತಿದ್ದು, ಇನ್ನೂ ಬೆಂಕಿ ಹತೋಟಿಗೆ ಬಂದಿಲ್ಲ.

ಪ್ಲಾಸ್ಟಿಕ್ ಗೋಡೌನ್ ಸಮೀಪವೇ ಗ್ಯಾಸ್ ಸಿಲಿಂಡರ್ ಗೋಡೌನ್ ಇತ್ತು. ಗ್ಯಾಸ್ ಗೋಡೌನ್‌ಗೆ ಬೆಂಕಿ ವ್ಯಾಪಿಸಿದ್ರೆ ದೊಡ್ಡ ಅನಾಹುತ ಆಗುವ ಸಾಧ್ಯತೆಯಿತ್ತು. ಸದ್ಯ ಭಾರೀ ಅನಾಹುತವೊಂದು ತಪ್ಪಿದೆ.

Must Read