Wednesday, February 8, 2023

Latest Posts

ದೆಹಲಿಯ ಬವಾನಾ ಪ್ಲಾಸ್ಟಿಕ್ ಕಾರ್ಖಾನೆಯಲ್ಲಿ ಬೆಂಕಿ : ಸ್ಥಳಕ್ಕೆ ಧಾವಿಸಿದ 15 ಅಗ್ನಿಶಾಮಕ ವಾಹನಗಳು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ದೆಹಲಿಯ ಬವಾನಾ ಪ್ರದೇಶದ ಪ್ಲಾಸ್ಟಿಕ್ ಗ್ರ್ಯಾನ್ಯೂಲ್ ಫ್ಯಾಕ್ಟರಿಯಲ್ಲಿ ಸೋಮವಾರ ಬೆಂಕಿ ಕಾಣಿಸಿಕೊಂಡಿದೆ. ಸ್ಥಳಕ್ಕೆ 15 ಅಗ್ನಿಶಾಮಕ ವಾಹನಗಳು ಧಾವಿಸಿ ಬೆಂಕಿಯನ್ನು ನಂದಿಸಿವೆ.

ಬವಾನಾದ ಎನ್ ಬ್ಲಾಕ್ ನಲ್ಲಿ ಘಟನೆ ನಡೆದಿದ್ದು, ಬೆಳಿಗ್ಗೆ 9 ಗಂಟೆ ಸುಮಾರಿಗೆ ಅಗ್ನಿಶಾಮಕ ದಳಕ್ಕೆ ಬೆಂಕಿಯ ಬಗ್ಗೆ ಮಾಹಿತಿ ಬಂದಿದೆ. ನಂತರ 15 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿದವು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಮೊದಲು ಜನವರಿ 21 ರಂದು ರಾಷ್ಟ್ರ ರಾಜಧಾನಿಯ ಕನ್ನಾಟ್ ಪ್ಲೇಸ್ ಪ್ರದೇಶದ ಹೋಟೆಲ್‌ನಲ್ಲಿ ದೊಡ್ಡ ಬೆಂಕಿ ಕಾಣಿಸಿಕೊಂಡಿತ್ತು. ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!