ಹೊಸದಿಗಂತ ಡಿಜಿಟಲ್ ಡೆಸ್ಕ್ :
ಉತ್ತರ ದೆಹಲಿಯ ರೋಶನಾರಾ ರಸ್ತೆಯಲ್ಲಿರುವ ಕಾರ್ಖಾನೆಯೊಂದರಲ್ಲಿ ಬುಧವಾರ ಭಾರಿ ಅಗ್ನಿ ಅವಘಡ ಸಂಭವಿಸಿದೆ ಎಂದು ಅಗ್ನಿಶಾಮಕ ಸೇವೆಯ ಅಧಿಕಾರಿ ತಿಳಿಸಿದ್ದಾರೆ.
ದೆಹಲಿ ಅಗ್ನಿಶಾಮಕ ಸೇವೆಯ ಮುಖ್ಯಸ್ಥ ಅತುಲ್ ಗಾರ್ಗ್ ಪ್ರಕಾರ, ಪುಲ್ ಬಂಗಾಶ್ ಮೆಟ್ರೋ ನಿಲ್ದಾಣದ ಬಳಿ ರೋಶನಾರಾ ರಸ್ತೆಯ ಜೈಪುರ ಗೋಲ್ಡನ್ ಟ್ರಾನ್ಸ್‌ಪೋರ್ಟ್‌ನಲ್ಲಿರುವ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡ ಬಗ್ಗೆ ಅಗ್ನಿಶಾಮಕ ನಿಯಂತ್ರಣ ಕೊಠಡಿಗೆ ಬೆಳಿಗ್ಗೆ 11:50 ಕ್ಕೆ ಕರೆ ಬಂದಿತು. ತದನಂತರ ಒಟ್ಟು 18 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿವೆ. ಘಟನೆಯಲ್ಲಿ ಇದುವರೆಗೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
ಬೆಂಕಿ ನಂದಿಸಿದ ನಂತರವೇ ನಿಖರವಾದ ಚಿತ್ರಣವು ಸಿಗಲಿದೆ ಮತ್ತು ಕಾರ್ಖಾನೆಯನ್ನು ಶೋಧಿಸಿದ ನಂತರವೇ ಮಾಹಿತಿ ಲಭ್ಯವಾಗುವುದು ಎಂದು ಅಗ್ನಿಶಾಮಕ ಅಧಿಕಾರಿಗಳು ಹೇಳಿದ್ದಾರೆ.