ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಪ್ರದೇಶ ರಾಜ್ಯದಲ್ಲಿ ಸೋಮವಾರ ರಾತ್ರಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಯುಪಿಯ ಝಾನ್ಸಿ ಜಿಲ್ಲೆಯಲ್ಲಿ ಮೂರು ಅಂತಸ್ತಿನ ಕಟ್ಟಡದಲ್ಲಿ ಸಂಭವಿಸಿದ ಬೆಂಕಿಯಲ್ಲಿ ನಾಲ್ವರು ಸಜೀವ ದಹನವಾಗಿದ್ದಾರೆ.
ಇಲೆಕ್ಟ್ರಾನಿಕ್ ಮತ್ತು ಸ್ಪೋರ್ಟ್ಸ್ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡು ನಾಲ್ವರು ಸಾವನ್ನಪ್ಪಿರುವ ಘಟನೆ ಎಲ್ಲರನ್ನೂ ಬೆಚ್ಚಿ ಬೀಳಿಸಿದೆ. ಶೋರೂಂನಲ್ಲಿ ಬೆಂಕಿ ನಂದಿಸಲು ಅಗ್ನಿಶಾಮಕ ವಾಹನಗಳು ಆಗಮಿಸಿ, ಬೆಂಕಿಯನ್ನು ಹತೋಟಿಗೆ ತಂದಿವೆ. ಈ ಬೆಂಕಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ ಎಂದು ಝಾನ್ಸಿ ಎಸ್ಪಿ ರಾಜೇಶ್ ತಿಳಿಸಿದ್ದಾರೆ. ಬೆಂಕಿಯ ಕಾರಣದ ಬಗ್ಗೆ ತನಿಖೆ ನಡೆಸಲಾಗುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.