Monday, July 4, 2022

Latest Posts

ವಿಶಾಖಪಟ್ಟಣಂ ಬಂದರಿನ ಗೋದಾಮಿಗೆ ಬೆಂಕಿ : 7 ಮಂದಿಗೆ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌
ವಿಶಾಖ ಪಟ್ಟಣಂನ ಗಂಗವರಂ ಬಂದರು ರಸ್ತೆಯ ಪೆಡಗಂಟ್ಯಾಡ ಸಮೀಪದ ಖಾಸಗಿ ಶಿಪ್ಪಿಂಗ್‌ ಕಂಪನಿಯ ಗೋದಾಮಿನಲ್ಲಿ ಬುಧವಾರ ರಾತ್ರಿ ಬೆಂಕಿ ಕಾಣಿಸಿಕೊಂಡಿದ್ದು ಏಳು ಮಂದಿ ಗಾಯಗೊಂಡಿದ್ದಾರೆ.

ಏಳೂ ಮಂದಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದ್ದು ಆವರಲ್ಲಿ ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿರುವ ಕುರಿತು ಮೂಲಗಳು ವರದಿ ಮಾಡಿವೆ. ಅಗ್ನಿಶಾಮಕ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದು ಬೆಂಕಿ ಆರಿಸುವ ಕಾರ್ಯ ಭರದಿಂದ ಸಾಗಿದೆ. ಘಟನೆಗೆ ಕಾರಣವೇನೆಂಬುದು ಇನ್ನೂ ತಿಳಿದು ಬಂದಿಲ್ಲ. ಶಾರ್ಟ್‌ ಸರ್ಕ್ಯೂಟ್‌ ನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಕಾರ್ಮಿಕರು ಶಂಕಿಸಿದ್ದಾರೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss