ಲಕ್ನೋದಲ್ಲಿ ಸೌದಿ ಏರ್‌ಲೈನ್ಸ್‌ ವಿಮಾನದ ಟೈಯರ್‌ನಿಂದ ಚಿಮ್ಮಿದ ಬೆಂಕಿ ಕಿಡಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಅಹಮದಾಬಾದ್‌ನಲ್ಲಿ ವಿಮಾನ ದುರಂತ ಘಟನೆ ಸಂಭವಿಸಿದ ಬಳಿಕ ಇತರೇ ವಿಮಾನಗಳಲ್ಲೂ ಒಂದಿಲ್ಲೊಂದು ಸಮಸ್ಯೆ ಕಾಣಿಸಿಕೊಳ್ಳುತ್ತಿರುವುದು ವರದಿಯಾಗುತ್ತಿದೆ. ಅದೇ ರೀತಿ ಹಜ್‌ ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಸೌದಿಯಾ ಏರ್‌ಲೈನ್ಸ್‌ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು ಲಕ್ನೋ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.

ವಿಮಾನ ಚಕ್ರಗಳು ರನ್‌ವೇಗೆ ಇಳಿಯುತ್ತಿದ್ದಂತೆ ಟೈಯರ್‌ನಿಂದ ಬೆಂಕಿ ಕಿಡಿಗಳು ಚಿಮ್ಮಿದ್ದು, ದಟ್ಟ ಹೊಗೆ ಹೊಮ್ಮಿದೆ. ಅದೃಷ್ಟವಶಾತ್‌ ಯಾವುದೇ ದುರಂತ ಸಂಭವಿಸದೇ ನೂರಾರು ಯಾತ್ರಿಕರು, ವಿಮಾನ ಸಿಬ್ಬಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದರ ವಿಡಿಯೋ ಕೂಡ ವೈರಲ್‌ ಆಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!