ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೂರು ಗೋಡೌನ್ ಗಳಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿರುವ ಘಟನೆ ಬೆಂಗಳೂರಿನ ಚಾಮರಾಜಪೇಟೆಯ ಗವಿಪುರಂ ಬಳಿಯ ಟಿಆರ್ ಮಿಲ್ ಆವರಣದಲ್ಲಿ ನಡೆದಿದ್ದು, ಮೂರು ಗೋಡೌನ್ ಗಳಲ್ಲಿ ಬೆಂಕಿ ಅವಘಡ ಸಂಭವಿಸಿದೆ.
ಟ್ರೈಯರ್, ಪೈಪ್ ಗಳು, ಪ್ಲೇವುಡ್ಗಳನ್ನು ಸಂಗ್ರಹಿಸಲಾಗಿದ್ದ ಶೆಡ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅಪಾರ ಹಾನಿಯಾಗಿದೆ. ಬೆಳಗಿನ ಜಾವ 4 ಗಂಟೆಗೆ ಬೆಂಕಿ ಅವಘಡ ಸಂಭವಿಸಿದ್ದು, ಮಾಹಿತಿ ಪಡೆದ ಅಗ್ನಿಶಾಮಕ ದಳದ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯ ಆರಂಭಿಸಿದ್ದಾರೆ.
ಅದೃಷ್ಟವಶಾತ್ ಯಾವುದೇ ಸಾವುನೋವು ಸಂಭವಿಸಿಲ್ಲ. ಕೋಟ್ಯಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿದ್ದು. ಬೆಂಕಿ ನಂದಿಸಲು ನಾಲ್ಕು ಅಗ್ನಿಶಾಮಕ ವಾಹನಗಳನ್ನು ಬಳಸಲಾಗಿದೆ.