5 ಅಂತಸ್ತಿನ ಕಟ್ಟಡದಲ್ಲಿ ಅಗ್ನಿ ಅವಘಡ: ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮಹಾರಾಷ್ಟ್ರದ ಮುಂಬೈನ ಮುಲುಂಡ್ ಪ್ರದೇಶದಲ್ಲಿನ 5 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಮಾಹಿತಿ ಪಡೆದ ಕೂಡಲೇ ಐದು ಅಗ್ನಿಶಾಮಕ ದಳಗಳು ಸ್ಥಳಕ್ಕೆ ದೌಡಾಯಿಸಿವೆ.

ಅವಘಡದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ, ಸದ್ಯ ಬೆಂಕಿಯನ್ನು ಹತೋಟಿಗೆ ತರಲು ಪ್ರಯತ್ನಿಸುತ್ತಿರುವುದಾಗಿ ಅಗ್ನಿಶಾಮಕ ಇಲಾಖೆ ತಿಳಿಸಿದೆ.

ಈ ಕುರಿತು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

ಸೋಮವಾರ ತಡರಾತ್ರಿ ದೆಹಲಿಯ ಸರೋಜಿನಿ ನಗರದ ಬಾಬು ಮಾರುಕಟ್ಟೆಯಲ್ಲಿ ಸಂಭವಿಸಿದ ಭಾರೀ ಬೆಂಕಿಯಲ್ಲಿ ನಾಲ್ಕು ಗಾರ್ಮೆಂಟ್ಸ್ ಅಂಗಡಿಗಳು ಸುಟ್ಟುಹೋಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಐದು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಬಂದು ಕೂಡಲೇ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!