ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಗೋಪಸಂದ್ರ ಗೇಟ್ ಬಳಿ ಕಾರಿನ ಎಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ ಕಾರಿನ ತುಂಬಾ ವ್ಯಾಪಿಸಿ ರಸ್ತೆಯಲ್ಲಿ ಕಾರು ಹೊತ್ತಿ ಉರಿದ ಘಟನೆ ನಡೆದಿದೆ.
ಕಾರು ರಸ್ತೆಯಲ್ಲಿ ಸಾಗುತ್ತಿದ್ದಾಗ ಎಂಜಿನ್‌ಗೆ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ. ಕೆಲ ಹೊತ್ತಿನಲ್ಲೇ ಬೆಂಕಿ ಕಾರಿನ ಕೆಲವು ಭಾಗಗಳನ್ನು ಆವರಿಸಿದ್ದು, ಅದೃಷ್ಟವಶಾತ್ ಕಾರಿನ ಚಾಲಕ ಪ್ರಾಣಪಾಯದಿಂದ ಪಾರಾಗಿದ್ದಾನೆ.
ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದವರು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸೂರ್ಯ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.