Saturday, June 25, 2022

Latest Posts

ಫಾರ್ಮಾ ಕಂಪನಿಯಲ್ಲಿ ಬೆಂಕಿ ಅವಘಡ, ಸ್ಥಳಕ್ಕೆ 10ಅಗ್ನಿಶಾಮಕ ವಾಹನಗಳ ದೌಡು

ಹೊಸದಿಗಂತ ಡಿಜಿಟಲ್‌ ಡೆಸ್ಕ್: 

ಗುಜರಾತ್‌ನ ಗಾಂಧಿನಗರ ಜಿಲ್ಲೆ, ಕಲೋಲ್‌ನ ಜಿಐಡಿಸಿಯಲ್ಲಿರುವ ಫಾರ್ಮಾ ಕಂಪನಿಯೊಂದರಲ್ಲಿ ಭಾರೀ ಅಗ್ನಿ ಅನಾಹುತ ಸಂಭವಿಸಿದೆ. ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಹತ್ತು ಅಗ್ನಿಶಾಮಕ ವಾಹನಗಳು ಧಾವಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿವೆ. ಇದುವರೆಗೂ ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಪ್ರಾಥಮಿಕ ಮಾಹಿತಿಯ ಪ್ರಕಾರ, ದುರಂತದ ಸಮಯದಲ್ಲಿ ಯಾವುದೇ ಕಾರ್ಮಿಕರು ಕಂಪನಿಯ ಆವರಣದಲ್ಲಿ ಇರಲಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಆದರೆ ಬೆಂಕಿ ನಂದಿಸಿದ ನಂತರವಷ್ಟೇ ಸತ್ಯಾಸತ್ಯತೆ ತಿಳಿಯಲಿದೆ ಎಂದು ಅಗ್ನಿಶಾಮಕ ಅಧಿಕಾರಗಳು ಮಾಹಿತಿ ನೀಡಿದ್ದಾರೆ. ಪೊಲೀಸ್‌ ಅಧಿಕಾರಿಗಳೂ ಸ್ಥಳದಲ್ಲಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss