ಹೊಸದಿಗಂತ ಡಿಜಿಟಲ್ ಡೆಸ್ಕ್:
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕರಿಯಂಗಳ ಗ್ರಾಮದ ಬಡಕಬೈಲ್ ಜಂಕ್ಷನ್ ನಲ್ಲಿ ಮಧ್ಯರಾತ್ರಿ ಬೆಂಕಿ ಅವಘಡ ಸಂಭವಿಸಿದ್ದು, 3-4 ಮನೆಗಳಿಗೆ ಬೆಂಕಿ ತಗುಲಿದೆ.
ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸ್ಥಳೀಯರ ಸಹಕಾರದೊಂದಿಗೆ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ರಾತ್ರಿ 1.00 ಗಂಟೆಗೆ ಸ್ಥಳೀಯ ನಿವಾಸಿ,ಗೋಣಿಚೀಲ ವ್ಯಾಪಾರಿಮೋನಾಕ ಎಂಬವರ ಮನೆಯಲ್ಲಿ ಈ ಬೆಂಕಿ ಅವಘಡ ಸಂಭವಿಸಿದ್ದು, ಅಕ್ಕ- ಪಕ್ಕದ ಮೂರ್ನಾಲ್ಕು ಮನೆಗೂ ಬೆಂಕಿಯ ಕೆನ್ನಾಲಗೆ ಚಾಚಿದೆ. ಈ ಘಟನೆಯಿಂದ ಯಾವುದೇ ಸಾವು,ನೋವು ಸಂಭವಿಸಿಲ್ಲ,ನಷ್ಟದ ಬಗ್ಗೆ ಇನ್ನಷ್ಠೆ ಗೊತ್ತಾಗಬೇಕಾಗಿದೆ.
ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ ಉಳಿಪ್ಪಾಡಿ ಅವರು ಸುದ್ದಿ ತಿಳಿಯುತ್ತಿದ್ದಂತೆ ಮಧ್ಯರಾತ್ರಿಯೇ ಸ್ಥಳಕ್ಕಾಗಮಿಸಿ ಮನೆಮಂದಿಗೆ ಸಾಂತ್ವನ ಹೇಳಿದರು. ಕಂದಾಯ ನಿರೀಕ್ಷಕ ವಿಜಯ್ ಆರ್ ಸಹಿತ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.