Sunday, December 3, 2023

Latest Posts

ಅಗ್ನಿ ಅವಘಡ : ಟ್ರಾನ್ಸ್​ಫಾರ್ಮರ್​ ಸ್ಫೋಟ, ಗುಜರಿ ಅಂಗಡಿ ಸುಟ್ಟು ಭಸ್ಮ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಟ್ರಾನ್ಸ್​ಫಾರ್ಮರ್​ ಸ್ಫೋಟಗೊಂಡು ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಗುಜರಿ ಅಂಗಡಿ ಸುಟ್ಟು ಭಸ್ಮವಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ನಗರದ ಲಗ್ಗೆರೆಯಲ್ಲಿ ಟ್ರಾನ್ಸ್​ಫಾರ್ಮರ್​ ಸ್ಫೋಟಗೊಂಡಿದ್ದು, ಬೆಂಕಿಯ ಕೆನ್ನಾಗಲಿಗೆಗೆ ಗುಜರಿ ಅಂಗಡಿ ಹೊತ್ತಿ ಉರಿದಿದೆ. ಅಂಗಡಿಯ ಅಕ್ಕಪಕ್ಕದ ಮನೆಗಳಿಗೂ ಬೆಂಕಿ ತಗುಲಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಆಗಿಲ್ಲ.

ವಿಷಯ ತಿಳಿದ ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!