ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಅಗ್ನಿ ಅವಘಡ: ತಪ್ಪಿದ ಅನಾಹುತ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

‌ಭೋಪಾಲ್-ದೆಹಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಬೋಗಿಯಲ್ಲಿ ಅಗ್ನಿ ಕಾಣಿಸಿಕೊಂಡಿದ್ದು, ಭಾರೀ ಅನಾಹುತವೊಂದು ತಪ್ಪಿದೆ.

ಇಂದು ಬೆಳಗ್ಗೆ ಮಧ್ಯಪ್ರದೇಶದ ಬಿನಾ ಜಿಲ್ಲೆಯ ಕುರ್ವೈ ಕೆಥೋರಾ ಬಳಿ ರೈಲು ಸಂಚರಿಸುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಅದೃಷ್ಟವಶಾತ್‌ ರೈಲಿನಲ್ಲಿದ್ದ ಪ್ರಯಾಣಿಕರೆಲ್ಲರೂ ಸುರಕ್ಷಿತವಾಗಿದ್ದಾರೆ.

ದಿಢೀರ್‌ ಬೆಂಕಿ ಕಂಡುಬಂದ ಕೂಡಲೇ ಪೊಲೀಸ್ ಸಿಬ್ಬಂದಿಯೊಬ್ಬರು ಅದನ್ನು ನಂದಿಸಲು ಮುಂದಾಗಿದ್ದಾರೆ. ಆದರೆ ಅಷ್ಟರಲ್ಲಾಗಲೇ ಬೋಗಿಯ ಕೆಳಭಾಗ ಸುಟ್ಟು ಹೋಗಿದೆ. ಈ ದುರಂತಕ್ಕೆ ನಿಖರ ಕಾರಣ ಇನ್ನೂ ತಿಳಿದಬಂದಿಲ್ಲ. ಈ ಕುರಿತು ರೈಲ್ವೆ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!