ಹೊಸದಿಗಂತ ಡಿಜಿಟಲ್ ಡೆಸ್ಕ್:
ಗುಜರಾತ್‌ನ ವಲ್ಸಾದ್ ಜಿಲ್ಲೆಯ ಪಾರ್ಡಿ ಗ್ರಾಮದ ಬಳಿ ಬಸ್‌ನಲ್ಲಿ ಬಾರೀ ಬೆಂಕಿ ಕಾಣಿಸಿಕೊಂಡಿದ್ದು, ಅದೃಷ್ಟವಶಾತ್ ಬಸ್‌ನಲ್ಲಿದ್ದ 16 ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ.
ಗುಜರಾತ್‌ನ ಅಹಮದಾಬಾದ್ನಿಂದ ರಾಜ್ಯದ ಬೆಳಗಾವಿಗೆ ತೆರಳುತ್ತಿದ್ದ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬಸ್‌ನಲ್ಲಿ 16 ಮಂದಿ ಪ್ರಯಾಣಿಕರಿದ್ದರು, ಕೂಡಲೇ ಅವರನ್ನು ಬಸ್‌ನಿಂದ ಕೆಳಗಿಳಿಸಿ ಸ್ಥಳಾಂತರಿಸಲಾಗಿದೆ. ಬಸ್‌ನಲ್ಲಿ ಹೇಗೆ ಬೆಂಕಿ ಕಾಣಿಸಿಕೊಂಡಿತು ಎಂಬುದಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ, ತನಿಖೆಯ ಬಳಿಕವಷ್ಟೇ ತಿಳಿದುಬರಲಿದೆ.
ಈ ಅಗ್ನಿ ಅವಘಡ ಹಿನ್ನೆಲೆ ಮುಂಬೈ – ಅಹಮದಾಬಾದ್ ಹೆದ್ದಾರಿಯಲ್ಲಿ ಕಾರ್ಯಾಚರಣೆ ನಡೆಯುತ್ತಿದ್ದ ಹಿನ್ನೆಲೆ ಎರಡು ಗಂಟೆಗಳ ಕಾಲ ರಸ್ತೆ ಬಂದ್ ಆಗಿತ್ತು ಎಂದು ವರದಿಯಾಗಿದೆ. ಈ ಬಗ್ಗೆ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.