ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿಯ ದ್ವಾರಕಾ ಸೆಕ್ಟರ್ 13ರ (ಶಾಬಾದ್ ಅಪಾರ್ಟ್ಮೆಂಟ್ನಲ್ಲಿ ಮಂಗಳವಾರ ಮುಂಜಾನೆ ಭಾರೀ ಬೆಂಕಿ ಅವಘಡ ಸಂಭವಿಸಿದೆ.
ಏಕಾಏಕಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆ ಅಪಾಯದಿಂದ ಪಾರಾಗುವ ಸಲುವಾಗಿ ಮೂವರು ಮಹಡಿಯಿಂದ ಹಾರಿದ್ದು, ಸ್ಥಿತಿ ಗಂಭೀರವಾಗಿದೆ.
ಎಂಆರ್ವಿ ಶಾಲೆಯ ಬಳಿಯ ಸೆಕ್ಟರ್ -13ರ ಶಾಬಾದ್ ಅಪಾರ್ಟ್ಮೆಂಟ್ನ ಏಳನೇ ಮಹಡಿಯಲ್ಲಿರುವ ಫ್ಲಾಟ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ. ಗಾಯಾಳುಗಳ ವಿವರಗಳು ಇನ್ನೂ ತಿಳಿದುಬಂದಿಲ್ಲ ಎಂದು ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದ್ದಾರೆ.