Thursday, March 23, 2023

Latest Posts

ಕುರ್ಚಿ ತಯಾರಿಕಾ ಕಾರ್ಖಾನೆಯಲ್ಲಿ ಬೆಂಕಿ: ಅಗ್ನಿಶಾಮಕ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮಂಗಳವಾರ ಮುಂಜಾನೆ ರಾಷ್ಟ್ರ ರಾಜಧಾನಿಯ ಬವಾನಾ ಕೈಗಾರಿಕಾ ಪ್ರದೇಶದಲ್ಲಿ ಕುರ್ಚಿ ತಯಾರಿಕಾ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಘಟನೆ ನಡೆದ ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳದವರು ಬೆಂಕಿ ನಂದಿಸಲು ಮುಂದಾಗಿದ್ದಾರೆ.

“ಬವಾನಾ ಕೈಗಾರಿಕಾ ಪ್ರದೇಶದಲ್ಲಿರುವ ಕುರ್ಚಿ ತಯಾರಿಕಾ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. 8 ಅಗ್ನಿಶಾಮಕ ಟೆಂಡರ್‌ಗಳು ಸ್ಥಳದಲ್ಲಿವೆ. ಅಗ್ನಿಶಾಮಕ ಕಾರ್ಯಾಚರಣೆ ನಡೆಯುತ್ತಿದೆ” ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇಲ್ಲಿಯವರೆಗೆ ಯಾವುದೇ ಸಾವು ನೋವುಗಳು ವರದಿಯಾಗಿಲ್ಲ.

ಘಟನೆಗೆ ಸಂಬಂಧಿಸಿದ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!