ಅಗ್ನಿ ಅವಘಡ: 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಪಾಯದಿಂದ ಪಾರು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ದೆಹಲಿಯ ಜಗತ್​ಪುರಿ ಪ್ರದೇಶದ ನ್ಯೂ ಬ್ರಿಜ್‌ಪುರಿಯಲ್ಲಿರುವ ಮದರಸಾದಲ್ಲಿ ಹಠಾತ್ ಬೆಂಕಿ ಕಾಣಿಸಿಕೊಂಡಿದೆ. ಮೀಟರ್​ ಬೋರ್ಡ್​ನಲ್ಲಿ ಮೊದಲ ಬಾರಿಗೆ ಬೆಂಕಿ ಕಾಣಿಸಿಕೊಂಡಿತ್ತು ಎಂದು ಹೇಳಲಾಗಿದ್ದು, ಬಳಿಕ ಕಟ್ಟಡಕ್ಕೆ ಬೆಂಕಿ ಹೊತ್ತಿ 3 ಸಿಲಿಂಡರ್​ಗಳು ಸ್ಫೋಟಗೊಂಡಿವೆ. ಘಟನೆ ಬಗ್ಗೆ ತಿಳಿದ ಕೂಡಲೇ 17 ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ತಲುಪಿ ಬೆಂಕಿ ನಂದಿಸುವ ಕೆಲಸ ಮಾಡಿವೆ.

ಸಿಲಿಂಡರ್ ಸ್ಫೋಟದಿಂದಾಗಿ ಅಗ್ನಿಶಾಮಕ ಸಿಬ್ಬಂದಿ ಗಾಯಗೊಂಡಿದ್ದಾರೆ. ಈ ಮದರಸಾದಲ್ಲಿ ಹಾಸ್ಟೆಲ್ ಕೂಡ ಇತ್ತು, ಅಲ್ಲಿ ಸುಮಾರು 100 ವಿದ್ಯಾರ್ಥಿನಿಯರು ಮತ್ತು ಶಿಕ್ಷಕರು ಕೂಡ ಇದ್ದರು. ಈಗ ಅವರೆಲ್ಲರನ್ನೂ ರಕ್ಷಿಸಲಾಗಿದೆ.

ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿದೆ ಎಂದು ಆ ಪ್ರದೇಶದ ಕಾರ್ಪೊರೇಟರ್ ರಾಜು ಸಾಯಿ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!