ಹೊಸ ಹುಲ್ಲು ಚಿಗುರಲಿ ಎಂದು ಅರಣ್ಯ ಪ್ರದೇಶಕ್ಕೆ ಬೆಂಕಿ : 30 ಎಕರೆ ಸುಟ್ಟು ಭಸ್ಮ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಹೊಸ ಹುಲ್ಲು ಚಿಗುರಲಿ ಎಂದು ಅರಣ್ಯ ಪ್ರದೇಶಕ್ಕೆ ಬೆಂಕಿ ಹಾಕಿದ ಪರಿಣಾಮ ಸುಮಾರು 30 ಎಕರೆ ಅರಣ್ಯ ಪ್ರದೇಶ ಸುಟ್ಟು ಭಸ್ಮವಾಗಿರುವ ಘಟನೆ ಕನಕಪುರ ತಾಲೂಕಿನ ದೊಡ್ಡಾಲಹಳ್ಳಿ ವ್ಯಾಪ್ತಿಯ ಸಂಗಮ ವನ್ಯಜೀವಿ ವಲಯದಲ್ಲಿ ನಡೆದಿದೆ.

ಅರಣ್ಯಕ್ಕೆ ಬೆಂಕಿಹಾಕಿದ ಹೂಳ್ಯ ಗ್ರಾಮದ ರಾಜಪ್ಪ (42) ಎಂಬಾತನನ್ನ ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ನಿನ್ನೆ ಸಂಗಮ ವನ್ಯಜೀವಿ ವಲಯದಲ್ಲಿ ಅರಣ್ಯ ಪ್ರದೇಶದಲ್ಲಿ ಕುರಿಗಾಹಿ ರಾಜಪ್ಪ ಮೇಕೆಗಳ ಮೇಯಿಸಲು ಹೋಗಿದ್ದ. ಅರಣ್ಯದಲ್ಲಿರುವ ಒಣ ಹುಲ್ಲು ಸುಟ್ಟರೆ ಹೊಸ ಹುಲ್ಲು ಚಿಗುರುತ್ತೆ. ಇದರಿಂದ ಕುರಿ, ಮೇಕೆಗಳಿಗೆ ಮೇವು ಸಿಗುತ್ತದೆ ಎಂಬ ಕಾರಣಕ್ಕೆ ಅರಣ್ಯಕ್ಕೆ ಬೆಂಕಿಹಚ್ಚಿದ್ದರು ಎನ್ನಲಾಗಿದೆ.

ಅರಣ್ಯಕ್ಕೆ ಬೆಂಕಿಬಿದ್ದ ಹಿನ್ನೆಲೆ ಗಸ್ತಿನಲ್ಲಿದ್ದ ಅರಣ್ಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದು, ಬಳಿಕ ಬೆಂಕಿನಂದಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ. ಬೆಂಕಿನಂದಿಸುವಷ್ಟರಲ್ಲಿ ಸುಮಾರು 30 ಎಕರೆಗಳಷ್ಟು ಅರಣ್ಯ ಸುಟ್ಟು ಭಸ್ಮವಾಗಿದೆ. ಈ ವೇಳೆ ಅಕ್ರಮವಾಗಿ ವನ್ಯಜೀವಿ ವಲಯಕ್ಕೆ ಎಂಟ್ರಿಯಾಗಿದ್ದ ರಾಜಪ್ಪನನ್ನ ಹಿಡಿದು ಈ ಬಗ್ಗೆ ಪ್ರಶ್ನೆ ಮಾಡಿದ್ದಕ್ಕೆ ಬೆಂಕಿಹಾಕಿದ್ದನ್ನ ರಾಜಪ್ಪ ಒಪ್ಪಿಕೊಂಡಿದ್ದಾನೆ. ಕೂಡಲೇ ಆರೋಪಿಯನ್ನು ವಶಕ್ಕೆ ಪಡೆದು ಅರಣ್ಯ ಇಲಾಖೆ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!