ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿಯ ಕೀರ್ತಿ ನಗರ ಪ್ರದೇಶದಲ್ಲಿ ಪೀಠೋಪಕರಣ ಕಾರ್ಖಾನೆ ಮತ್ತು ಗೋಡೌನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತರನ್ನು ಉತ್ತರ ಪ್ರದೇಶದ ಅಜಂಗಢ ನಿವಾಸಿ ಅತುಲ್ ರಾಯ್ ಮತ್ತು ಬಿಹಾರದ ಗಯಾ ನಿವಾಸಿ ನಂದ್ ಕಿಶೋರ್ ದುಬೆ ಎಂದು ಗುರುತಿಸಲಾಗಿದೆ.
ದೆಹಲಿ ಪೊಲೀಸರ ಪ್ರಕಾರ, ಕೀರ್ತಿ ನಗರ ಪ್ರದೇಶದ ಪೊಲೀಸ್ ಠಾಣೆಯಲ್ಲಿ ಬೆಳಿಗ್ಗೆ 4.30 ರ ಸುಮಾರಿಗೆ ಡಬ್ಲ್ಯುಎಚ್‌ಎಸ್ ಕೀರ್ತಿ ನಗರದಲ್ಲಿರುವ ಎರಡು ಕಟ್ಟಡಗಳ ಮೇಲ್ಛಾವಣಿಯ ಮೇಲೆ ಬೆಂಕಿ ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ. ಅಧಿಕಾರಿಗಳ ಪ್ರಕಾರ, ಬೆಂಕಿಯನ್ನು ನಂದಿಸಲು ಏಳು ಅಗ್ನಿಶಾಮಕ ಟೆಂಡರ್‌ಗಳನ್ನು ಸ್ಥಳಕ್ಕೆ ಕರೆಸಲಾಯಿತು. ಆವರಣವನ್ನು ಕೂಲಂಕುಷವಾಗಿ ಪರಿಶೀಲಿಸಿದಾಗ ಮೇಲ್ಛಾವಣಿಯ ಕೊಠಡಿ ಒಳಗಿನಿಂದ ಬೀಗ ಹಾಕಿರುವುದು ಕಂಡುಬಂದಿದೆ. ಪರಿಣಾಮ ಇಬ್ಬರು ವ್ಯಕ್ತಿಗಳು ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ.
ಬೆಂಕಿಯ ಕಾರಣವನ್ನು ಕಂಡುಹಿಡಿಯಲು ವಿಧಿ ವಿಜ್ಞಾನ ಪ್ರಯೋಗಾಲಯ ತಂಡವನ್ನು ಸ್ಥಳಕ್ಕೆ ಕರೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.