ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರದ ಪುಣೆಯಲ್ಲಿರುವ ಗೋಡೌನ್‌ನಲ್ಲಿ ಇಂದು ಬೆಳಿಗ್ಗೆ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳಕ್ಕೆ 15ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ದೌಡಾಯಿಸಿವೆ.
ಬೆಂಕಿಯ ಕೆನ್ನಾಲಿಗೆ ಮುಗಿಲೆತ್ತರಕ್ಕೆ ಚಾಚಿದ್ದು, ದಟ್ಟ ಹೊಗೆ ಆವರಿಸಿದೆ. ಶಾರ್ಟ್ ಸರ್ಕ್ಯೂಟ್ ಪರಿಣಾಮ ಈ ಅವಘಡ ಸಂಭವಿಸಿರಬಹುದು ಎಂದು ಹೇಳಲಾಗುತ್ತಿದೆ.
ಈವರೆಗೆ ಯಾವುದೇ ಸಾವು ನೋವಿನ ಪ್ರಕರಣ ವರದಿಯಾಗಿಲ್ಲ. ಈ ಘಟನೆಯ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.